ಜಿಲ್ಲೆಯ ಬಗ್ಗೆ
ಹಾಸನ ಜಿಲ್ಲೆಯು ಭಾರತದಲ್ಲಿ ಕರ್ನಾಟಕ ರಾಜ್ಯದ 30 ಜಿಲ್ಲೆಗಳ ಪೈಕಿ ಕರ್ನಾಟಕದ ನೈರುತ್ಯ ದಿಕ್ಕಿನಲ್ಲಿರುವ ಒಂದು ಜಿಲ್ಲೆ. ಜಿಲ್ಲೆಯು ಶ್ರೀಮಂತ ಇತಿಹಾಸದಿಂದ ಹಾಗೂ ಸ್ಮರಣೀಯ ಘಟನೆಗಳಿಂದ ಕೂಡಿದೆ. ಬೇಲೂರು ತಾಲ್ಲೂಕಿನ ಈಗಿನ ಹಳೇಬೀಡಾಗಿರುವ ಹಿಂದಿನ ದ್ವಾರಸಮುದ್ರವನ್ನು ರಾಜಧಾನಿಯಾಗಿ ಮಾಡಿಕೊಂಡಿದ್ದ ಹೊಯ್ಸಳ ಚಕ್ರವರ್ತಿಗಳ ಅಧಿಕಾರಾವಧಿಯಲ್ಲಿ ಈ ಜಿಲ್ಲೆಯು ತನ್ನ ವೈಭವದ ಉತ್ತುಂಗವನ್ನು ತಲುಪಿತ್ತು. ಕಣ್ಮನ ಸೆಳೆಯುವ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ಈ ಜಿಲ್ಲೆಯು ಬೇಲೂರು ಮತ್ತು ಹಳೇಬೀಡಿನಲ್ಲಿರುವಂತಹ ಹೊಯ್ಸಳ ಶೈಲಿಯ ವಾಸ್ತು ಹಾಗೂ ಶಿಲ್ಪಕಲೆಯ ತವರಾಗಿದೆ. ಜೈನಸ್ಮಾರಕಗಳಿಂದ ಕೂಡಿರುವ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳವು ಜೈನರ ಸುಪ್ರಸಿದ್ಧ ಯಾತ್ರಾಸ್ಥಳವಾಗಿದೆ. ಕಣ್ಮನ ಸೆಳೆಯುವ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ಈ ಜಿಲ್ಲೆಯು ಬೇಲೂರು ಮತ್ತು ಹಳೇಬೀಡಿನಲ್ಲಿರುವಂತಹ ಹೊಯ್ಸಳ ಶೈಲಿಯ ವಾಸ್ತು ಹಾಗೂ ಶಿಲ್ಪಕಲೆಯ ತವರಾಗಿದೆ.